ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
ತೀತ 2
ಕ್ರೈಸ್ತರೆಲ್ಲರೂ ಸನ್ನಡತೆಯವರಾಗಿರಬೇಕೆಂಬ ಸ್ವಸ್ಥ ಬೋಧನೆ
ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು. ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯಲ್ಲಿ ಸ್ವಸ್ಥರು ಆಗಿರಬೇಕೆಂದು ಬೋಧಿಸು. ಹಾಗೆಯೇ, ವೃದ್ಧ ಸ್ತ್ರೀಯರು 1ಚಾಡಿಹೇಳುವವರೂ 2ಮದ್ಯಕ್ಕೆ ಅಧೀನರು ಆಗಿರದೆ 3ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ, ಸದ್ಬೋಧಕಿಯರು ಆಗಿರಬೇಕು. ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, 4ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ 5 ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ 6ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು. ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು7. ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ 8ಸತ್ಯವೂ 9ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ 10ಸುಬುದ್ಧಿಯೂ ಇರಬೇಕು; 11ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು. 12ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ, ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ 13ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು. ಏಕೆಂದರೆ 14ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು 15ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ 16ನಿರೀಕ್ಷೆಯನ್ನು, ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ. 17ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ 18ಸತ್ಕ್ರಿಯೆಗಳಲ್ಲಿ ಆಸಕ್ತರಾದ 19ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ 20ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.
ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ 21ಖಂಡಿಸುತ್ತಾ ಇರು. 22ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.
Source notes (22)
- Footnote 1 ತಿಮೊ. 3:11
- Footnote 1 ತಿಮೊ. 3:8; 5:2
- Footnote 1 ತಿಮೊ. 2:9
- Footnote 1 ತಿಮೊ. 6:1
- Footnote 1 ತಿಮೊ. 5:14
- Footnote ಆದಿ 3:16
- Footnote 1 ತಿಮೊ 5:1
- Footnote 2 ಕೊರಿ 11:3
- Footnote 1 ತಿಮೊ 2:2
- Footnote 1 ತಿಮೊ 6:3
- Footnote ನೆಹೆ 5:9; 1 ತಿಮೊ 5:14; 1 ಪೇತ್ರ 2:12; 3:16
- Footnote 1 ಪೇತ್ರ 2:18; ಕೊಲೊ 3:22
- Footnote ಮತ್ತಾ 5:16; ಫಿಲಿ 2:15
- Footnote 1 ತಿಮೊ 2:4
- Footnote ತೀತ 3:4
- Footnote ತೀತ 1:2
- Footnote ಕೀರ್ತ 130:8; 1 ಪೇತ್ರ 1:18-19
- Footnote ತೀತ 3:8; ಎಫೆ 2:10
- Footnote ಯೆಹೆ 37:23; ವಿಮೋ 19:5
- Footnote 1 ತಿಮೊ 2:6
- Footnote ತೀತ 1:13; 1 ತಿಮೊ 5:20
- Footnote 1 ತಿಮೊ 4:12
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019. Copyright © 2017, 2019 Bridge Connectivity Solutions. Licensed under CC BY-SA 4.0. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.