Skip to content
BibleKenya

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಯೆಶಾಯ 12

ಸ್ತೋತ್ರ ಗೀತೆಗಳು

ಆ ದಿನದಲ್ಲಿ ನೀನು ಹೇಳುವುದೇನೆಂದರೆ:

“ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು;

ನೀವು ನನ್ನ ಮೇಲೆ ಕೋಪಗೊಂಡಿದ್ದರೂ,

ಆ ನಿಮ್ಮ ಕೋಪವು ಪರಿಹಾರವಾಗಿ

ನನ್ನನ್ನು ಸಂತೈಸುತ್ತೀರಲ್ಲವೆ?

ನಿಜವಾಗಿಯೂ ದೇವರೇ ನನಗೆ ರಕ್ಷಣೆಯು,

ನಾನು ಭರವಸವಿಡುವೆನು ಮತ್ತು ಭಯಪಡೆನು.

ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ,

ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”

ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ

ನೀವು ನೀರನ್ನು ಸೇದುವಿರಿ.

ಆ ದಿನದಲ್ಲಿ ನೀವು ಹೀಗೆ ಹೇಳುವಿರಿ,

“ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ

ಅವರ ಕ್ರಿಯೆಗಳನ್ನು ಪ್ರಕಟಿಸಿರಿ.

ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.

ಯೆಹೋವ ದೇವರಿಗೆ ಹಾಡಿರಿ.

ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ.

ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.

ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ.

ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.