Skip to content
BibleKenya

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 101

ದಾವೀದನ ಕೀರ್ತನೆ.

ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು;

ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು.

ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು;

ನೀವು ಯಾವಾಗ ನನ್ನ ಬಳಿಗೆ ಬರುವಿರಿ?

ನಾನು ನಿರ್ದೋಷ ಹೃದಯದಿಂದ

ನನ್ನ ಮನೆಯೊಳಗೆ ನಡೆದುಕೊಳ್ಳುವೆನು.

ನಾನು ಕೆಟ್ಟ ಕಾರ್ಯವನ್ನು

ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ.

ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು;

ಅದರಲ್ಲಿ ನಾನು ಭಾಗವಹಿಸುವುದಿಲ್ಲ.

ಮೂರ್ಖಜನರು ನನ್ನಿಂದ ದೂರವಿರುವರು;

ದುಷ್ಟತನವನ್ನು ಅರಿಯದಿರುವೆನು.

ಮರೆಯಾಗಿ ನೆರೆಯವನ ಮೇಲೆ

ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು;

ಗರ್ವದ ಕಣ್ಣೂ, ಅಹಂಕಾರದ ಹೃದಯವೂ

ಉಳ್ಳವನನ್ನು ಸಹಿಸಲಾರೆನು.

ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು;

ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು;

ನಿಷ್ಕಳಂಕವಾಗಿ ನಡೆಯುವವರೇ

ನನ್ನ ಸೇವೆಯಲ್ಲಿರಬೇಕು.

ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು;

ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು.

ದುಷ್ಟತನ ಮಾಡುವವರೆಲ್ಲರನ್ನು

ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು;

ಯೆಹೋವ ದೇವರ ಪಟ್ಟಣದೊಳಗಿಂದ

ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.