Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಕೀರ್ತನೆಗಳು 113
ಯೆಹೋವ ದೇವರನ್ನು ಸ್ತುತಿಸಿರಿ.
ಯೆಹೋವ ದೇವರ ಸೇವಕರೇ,
ಯೆಹೋವ ದೇವರ ಹೆಸರನ್ನು ಸ್ತುತಿಸಿರಿ.
ಇಂದಿನಿಂದ ಯುಗಯುಗಕ್ಕೂ
ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ.
ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ
ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು.
ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು;
ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.
ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ?
ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ.
ಆಕಾಶವನ್ನೂ, ಭೂಮಿಯನ್ನೂ
ತಗ್ಗಿಸಿಕೊಂಡು ನೋಡುತ್ತಾರೆ.
ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ,
ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ.
ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ.
ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.
ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ,
ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ.
ಯೆಹೋವ ದೇವರನ್ನು ಸ್ತುತಿಸಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.