Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಕೀರ್ತನೆಗಳು 125
ಯಾತ್ರಾ ಗೀತೆ.
ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ;
ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ,
ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ
ತಮ್ಮ ಜನರ ಸುತ್ತಲೂ ಇದ್ದಾರೆ.
ನೀತಿವಂತರು ತಮ್ಮ ಕೈಗಳನ್ನು
ಅನ್ಯಾಯಕ್ಕೆ ಚಾಚದ ಹಾಗೆ,
ದುಷ್ಟನ ಕೋಲು ನೀತಿವಂತರ
ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.
ಯೆಹೋವ ದೇವರೇ, ಒಳ್ಳೆಯವರಿಗೂ,
ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.
ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು,
ದುಷ್ಟರ ಸಂಗಡ ದೇವರು ತೊಲಗಿಸಲಿ.
ಇಸ್ರಾಯೇಲರ ಮೇಲೆ ಸಮಾಧಾನವಿರಲಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.