Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಕೀರ್ತನೆಗಳು 126
ಯಾತ್ರಾ ಗೀತೆ.
ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ
ನಾವು ಕನಸು ಕಂಡವರ ಹಾಗಿದ್ದೆವು.
ಆಗ ನಮ್ಮ ಬಾಯಿ ನಗೆಯಿಂದಲೂ,
ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು;
ಆಗ ಜನಾಂಗಗಳು,
“ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.
ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ;
ಆದಕಾರಣ ಸಂತೋಷಿಸುತ್ತಾ ಇದ್ದೇವೆ.
ಯೆಹೋವ ದೇವರೇ, ನೆಗೆವನಲ್ಲಿರುವ1 ಹೊಳೆಗಳ ಹಾಗೆ
ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ.
ಕಣ್ಣೀರಿನಿಂದ ಬಿತ್ತುವವರು,
ಆನಂದ ಗೀತದೊಡನೆ ಕೊಯ್ಯುವರು;
ಬಿತ್ತಲು ಬೀಜವನ್ನು ಹೊತ್ತುಕೊಂಡು
ಅಳುತ್ತಾ ಹೋಗುವವರು,
ತಮ್ಮ ಸಿವುಡುಗಳನ್ನು ಹೊತ್ತುಕೊಂಡು
ಆನಂದ ಗೀತದೊಡನೆ ತಿರುಗಿ ಬರುವರು.
Source notes (1)
- Footnote ನೆಗೆವನಲ್ಲಿರುವ ಅಂದರೆ ದೇಶದ ದಕ್ಷಿಣ ಪ್ರಾಂತ್ಯ
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.