Skip to content
BibleKenya

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 142

ದಾವೀದನ ಮಾಸ್ಕಿಲ ರಾಗದ ಪದ್ಯ. ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ.

ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ;

ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.

ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ;

ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.

ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ,

ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ;

ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ

ನನಗೆ ಉರುಲನ್ನು ಒಡ್ಡಿದ್ದಾರೆ.

ನೋಡಿರಿ ನನ್ನ ಬಲಗಡೆಯಲ್ಲಿ,

ನನ್ನ ಪರವಾಗಿ ಯಾರೂ ಇಲ್ಲ;

ಆಶ್ರಯವು ನನಗೆ ಇಲ್ಲ;

ನನಗಾಗಿ ಚಿಂತಿಸುವವರು ಯಾರೂ ಇಲ್ಲ.

ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ:

“ನೀವು ನನ್ನ ಆಶ್ರಯವೂ,

ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”

ನನ್ನ ಕೂಗನ್ನು ಆಲೈಸಿರಿ,

ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ;

ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ,

ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.

ನಿಮ್ಮ ಹೆಸರನ್ನು ಕೊಂಡಾಡುವ

ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ;

ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು

ನೀತಿವಂತರು ನನ್ನ ಹತ್ತಿರ ಸೇರಿಬರುವರು.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.