Skip to content
BibleKenya

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 15

ದಾವೀದನ ಕೀರ್ತನೆ.

ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು?

ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?

ದೋಷವಿಲ್ಲದವರಾಗಿ ಜೀವಿಸಿ,

ನೀತಿಯನ್ನು ನಡೆಸಿ,

ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;

ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ,

ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ,

ಇತರರನ್ನು ನಿಂದಿಸುವುದೂ ಇಲ್ಲ;

ಅವರು ದುಷ್ಟರ ಸಹವಾಸ ಇಲ್ಲದವರೂ

ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ

ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ,

ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.

ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ;

ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು.

ಈ ರೀತಿಯಾಗಿ ಬಾಳುವವರು

ಎಂದಿಗೂ ಕದಲುವುದಿಲ್ಲ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.