Skip to content
BibleKenya

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 32:8

Verse 8 is marked below, with the whole chapter around it. Read from the start

ದಾವೀದನ ಕೀರ್ತನೆ. ಮಾಸ್ಕಿಲ ಪದ್ಯ.

ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ,

ಯಾರ ಪಾಪಗಳು ಮುಚ್ಚಲಾಗಿವೆಯೋ

ಅವರೇ ಧನ್ಯರು.

ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ,

ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ

ಆ ಮನುಷ್ಯನು ಧನ್ಯನು.

ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ,

ದಿನವೆಲ್ಲಾ ನರಳುವುದರಿಂದ

ನನ್ನ ಎಲುಬುಗಳು ಸವೆದು ಹೋದವು.

ದೇವರೇ, ರಾತ್ರಿ ಹಗಲು

ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು;

ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ

ಕುಂದಿಹೋಗುವಂತೆ ಆಯಿತು.

ನನ್ನ ಪಾಪವನ್ನು ನಿಮಗೆ ತಿಳಿಸಿ,

ನನ್ನ ಅನ್ಯಾಯವನ್ನು ಮರೆಮಾಡದೆ,

“ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ

ಅರಿಕೆ ಮಾಡುವೆನು,” ಎಂದು ಹೇಳಿದೆನು;

ಆಗ, ನೀವು

ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.

ಆದುದರಿಂದ ಭಕ್ತರೆಲ್ಲರು ನೀವು

ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ;

ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು

ಅವರ ಸಮೀಪಕ್ಕೆ ಬರುವುದಿಲ್ಲ.

ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ;

ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ;

ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.

ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ,

ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು;

ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.

ವಿವೇಕವಿಲ್ಲದ ಕುದುರೆಯ ಹಾಗೆಯೂ,

ಹೇಸರಗತ್ತೆಯ ಹಾಗೆಯೂ ಇರಬೇಡಿರಿ;

ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು,

ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.

ದುಷ್ಟರಿಗೆ ವ್ಯಥೆಗಳು ಬಹಳ;

ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು

ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.

ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ;

ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.

Full source notice & licence · CC BY-SA 4.0 · SourceEdition imported 2026-10-25.

BibleKenya

Reader settings

Theme
Font
Alignment
Reading width

Saved in this browser and used offline too. Press ? for keyboard shortcuts.