Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಕೀರ್ತನೆಗಳು 43
ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ,
ಭಕ್ತಿಹೀನ ಜನತೆಯ ವಿರೋಧವಾಗಿ
ನನ್ನ ನ್ಯಾಯವನ್ನು ವಾದಿಸಿರಿ.
ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ
ನನ್ನನ್ನು ತಪ್ಪಿಸಿರಿ.
ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು;
ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ?
ಏಕೆ ನಾನು ಶತ್ರುವಿನ ಬಾಧೆಯಿಂದ
ದುಃಖದಲ್ಲಿ ನಡೆದುಕೊಳ್ಳಬೇಕು?
ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ;
ಅವು ನನ್ನನ್ನು ನೀವು ವಾಸಿಸುವ
ನಿಮ್ಮ ಪರಿಶುದ್ಧ ಪರ್ವತಕ್ಕೆ
ನನ್ನನ್ನು ಬರಮಾಡಲಿ.
ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು.
ನನ್ನ ಸಂತೋಷವೂ ಹರ್ಷವೂ
ಆಗಿರುವ ನಿಮ್ಮ ಬಳಿಗೂ ಬಂದು,
ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.
ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ?
ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ?
ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ.
ಹೌದು, ನಾನು
ದೇವರನ್ನೇ ಕೊಂಡಾಡುತ್ತಿರುವೆನು.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.