Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಕೀರ್ತನೆಗಳು 70
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ದಾವೀದನ ಕೀರ್ತನೆ. ಬೇಡಿಕೆ.
ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ;
ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.
ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು
ನಾಚಿಕೆಪಟ್ಟು ಗಲಿಬಿಲಿಯಾಗಲಿ.
ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ
ಹಿಂಜರಿದು ಅವಮಾನ ಹೊಂದಲಿ.
“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು
ತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ.
ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ
ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ.
ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು,
“ದೇವರು ಮಹೋನ್ನತರು,”
ಎಂದು ಯಾವಾಗಲೂ ಹೇಳಲಿ.
ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ.
ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ.
ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ,
ಯೆಹೋವ ದೇವರೇ, ತಡಮಾಡದೆ ಬನ್ನಿರಿ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.