Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಕೀರ್ತನೆಗಳು 82
ಆಸಾಫನ ಕೀರ್ತನೆ.
ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ,
ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.
“ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ.
ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?
ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ.
ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.
ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ.
ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ.
“ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ.
ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ.
ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ.
“ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು,
ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.
ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ.
ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.”
ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ.
ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.