Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ
ಕೀರ್ತನೆಗಳು 93
ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ.
ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ.
ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.
ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ.
ಯುಗಯುಗದಿಂದ ನೀವು ಇದ್ದೀರಿ.
ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ.
ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ.
ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.
ಮಹಾಸಾಗರದ ಶಬ್ದಕ್ಕಿಂತಲೂ,
ಸಮುದ್ರದ ಬಲವಾದ ಅಲೆಗಳಿಗಿಂತಲೂ
ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.
ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು.
ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ
ನಿಮ್ಮ ಆಲಯವನ್ನು ಅಲಂಕರಿಸುತ್ತದೆ.
Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ. Copyright © 1999, 2020, 2022 Biblica, Inc. Licensed under CC BY-SA 4.0. “Biblica” is a trademark registered in the United States Patent and Trademark Office by Biblica, Inc. Source: eBible.org. Typeset from the source files; no intended changes to scripture wording. BibleKenya is not endorsed by the rights holder.
Full source notice & licence · CC BY-SA 4.0 · SourceEdition imported 2026-10-25.